Wednesday, November 30, 2022

ಮಳೆಯ ಅಬ್ಬರ: ಹಳ್ಳದಲ್ಲಿ ಕೊಚ್ಚಿಹೋದ ನಾಲ್ವರು ಮಹಿಳೆಯರು

Follow Us

newsics.com

ಕೊಪ್ಪಳ; ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಆರಂಭವಾಗಿದೆ. ಬೆಂಗಳೂರು, ಕೊಪ್ಪಳ, ರಾಯಚೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ.

ಈ ನಡುವೆ ಸಂಕನೂರು ಗ್ರಾಮದ ಹಳ್ಳ ದಾಟಲು ಯತ್ನಿಸಿ ನಾಲ್ವರು ಮಹಿಳೆಯರು ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಫ್ಯಾಕ್ಟರಿ ಕೆಲಸ ಮುಗಿಸಿ ನಿನ್ನೆ ರಾತ್ರಿ ವಾಪಸ್ಸಾಗುತ್ತಿದ್ದ ವೇಳೆ ನೀರಿನ ರಭಸಕ್ಕೆ ನಾಲ್ವರು ಕೊಚ್ಚಿ ಹೋಗಿದ್ದಾರೆ.

ಭುವನೇಶ್ವರಿ ಪೊಲೀಸ್​ ಪಾಟೀಲ್​ (35), ಗಿರಿಜವ್ವ ಕಲ್ಲನಗೌಡ ಮಾಲಿ ಪಾಟೀಲ್​(30), ವೀಣಾ ಬಸವನಗೌಡ ಪಾಟೀಲ್​ (20) ಹಾಗೂ ಪವಿತ್ರ ಸಿದ್ದಯ್ಯ ಪೋಲಿಸ್​ ಪಾಟೀಲ್​ (40)  ಎನ್ನಲಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಶೋಧ ಕಾರ್ಯ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

ರಾಯಚೂರು; ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಕುಸಿದು ಬಿದ್ದು ವೃದ್ಧನೋರ್ವ ಮೃತಪಟ್ಟ ಘಟನೆ  ಜಿಲ್ಲೆಯ ಮಸ್ಕಿಯಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತ ನಾಪತ್ತೆ: ಶವವಾಗಿ ಗೋಡೆಯಲ್ಲಿ ಪತ್ತೆ

 

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!