ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿನಿಂದ ಅಸುನೀಗುವವರ ಅಂತ್ಯಕ್ರಿಯೆ ವೆಚ್ಚವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿದೆ.
ಈ ವೆಚ್ಚವನ್ನು ಬಿಬಿಎಂಪಿ ಭರಿಸಲಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವ ಅವರು, ಇನ್ನು ಮುಂದೆ ಕೊರೋನಾದಿಂದ ಮೃತಪಟ್ಟವರ ಕುಟುಂಬದವರು ಅಂತ್ಯಕ್ರಿಯೆಗಾಗಿ ಯಾವುದೇ ಹಣ ಪಾವತಿಸಬೇಕಾಗಿಲ್ಲ ಎಂದು ತಿಳಿಸಿದ್ದಾರೆ. ಈ ಮೊದಲು ಒಬ್ಬರ ಶವಸಂಸ್ಕಾರಕ್ಕೆ 1250 ರೂ. ವಿಧಿಸಲಾಗುತ್ತಿತ್ತು. ಇನ್ನು ಮುಂದೆ ಈ ವೆಚ್ಚವನ್ನು ಬಿಬಿಎಂಪಿ ಭರಿಸಲಿದೆ. ಕೊರೋನಾ ವೈರಸ್ ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಸಹಕರಿಸುವ ಸಿಬ್ಬಂದಿಗೆ ಪ್ರೋತ್ಸಾಹಧನವಾಗಿ 500 ರೂಪಾಯಿ ನೀಡಲಾಗುವುದು ಎಂದೂ ಕಂದಾಯ ಸಚಿವ ಅಶೋಕ್ ತಿಳಿಸಿದ್ದಾರೆ.
ಇನ್ಮುಂದೆ ಬೆಂಗಳೂರಲ್ಲಿ ಕೊರೋನಾ ಮೃತರ ಅಂತ್ಯಕ್ರಿಯೆ ಉಚಿತ
Follow Us