newsics.com
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಾಲಕಿಯೊಬ್ಬಳನ್ನು ಕಾರಿನಲ್ಲಿ ಅಪಹರಿಸಿ ಐವರು ದುರುಳರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ಪೊಲೀಸರು ಇದೀಗ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಕಾರಿನಲ್ಲಿ ಅಪಹರಿಸಿದ ದುಷ್ಕರ್ಮಿಗಳು ಮತ್ತು ಬರಿಸುವ ವಸ್ತು ನೀಡಿದ್ದಾರೆ. ಪ್ರಜ್ಞೆ ತಪ್ಪಿದ ಬಳಿಕ ಕೊಠಡಿಯಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ದೂರಿನಲ್ಲಿ ಕೆಲವು ಗೊಂದಲದ ಅಂಶಗಳು ಕೂಡ ಇವೆ. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.