newsics.com
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರ್ತಿ ಬೈಲ್ ಎಂಬಲ್ಲಿ ಅನಿಲ ಟ್ಯಾಂಕರ್ ಸ್ಫೋಟಗೊಂಡಿದೆ. ಬೆಂಕಿ ಆವರಿಸಿದ್ದು, ಟ್ಯಾಂಕರ್ ಸುಟ್ಟು ಹೋಗಿದೆ.
ಇಂದು ಮುಂಜಾನೆ ಐದು ಗಂಟೆ ಹೊತ್ತಿಗೆ ಈ ದುರಂತ ಸಂಭವಿಸಿದೆ. ಮಂಗಳೂರಿನಿಂದ ಮುಂಬೈಗೆ ಅನಿಲ ಸಾಗಿಸುತ್ತಿದ್ದ ವೇಳೆ ಈ ದುರಂತ ನಡೆದಿದೆ.
ಟ್ಯಾಂಕರ್ ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ