newsics.com
ಚಿಕ್ಕಬಳ್ಳಾಪುರ: ಜಿಲೆಟಿನ್ ಸ್ಫೋಟದಲ್ಲಿ ಐದು ಮಂದಿ ಮೃತಪಟ್ಟಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿಗೆ ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಬೆಂಗಳೂರಿನಿಂದ ಸ್ಫೋಟಕ ಪತ್ತೆ ಪರಿಣಿತರು ಕೂಡ ಆಗಮಿಸಿದ್ದಾರೆ. ಪ್ರಕರಣ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಎಸ್ ಪಿ ಆದೇಶ ನೀಡಿದ್ದಾರೆ.
ಇದೇ ವೇಳೆ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ . ಸುಧಾಕರ್ ಇದು ಅಕ್ರಮ ಕ್ವಾರೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.