Monday, April 12, 2021

ನಂಜನಗೂಡಿನ ಜುಬಿಲಿಯಂಟ್ ಕಾರ್ಖಾನೆ ಪುನಾರಂಭಕ್ಕೆ ಸರ್ಕಾರ ಸಮ್ಮತಿ

ಮೈಸೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹೆಚ್ಚಾಗಲು ಕಾರಣವಾಗಿದ್ದ ನಂಜನಗೂಡಿನಲ್ಲಿರುವ ಜುಬಿಲಿಯಂಟ್ ಔಷಧ ಕಾರ್ಖಾನೆ ಪುನಾರಂಭಕ್ಕೆ ರಾಜ್ಯ ಸರ್ಕಾರ ಸಮ್ಮತಿಸಿದೆ.
ಕೋವಿಡ್-19ಗೆ ಔಷಧ ಅಮೆರಿಕದ ಕಂಪನಿ ಸಿದ್ಧಪಡಿಸಿರುವ ರೆಮ್ಡೆ ಸಿವಿರ್ ಔಷಧವನ್ನು ತಯಾರಿಸಲು ಜುಬಿಲಿಯಂಟ್ ಕಾರ್ಖಾನೆ ಅನುಮತಿ ಪಡೆದುಕೊಂಡಿದೆ.
ಜುಬಿಲಿಯಂಟ್ ಕಂಪನಿಯಲ್ಲಿ ತಯಾರಾಗುವ ಔಷಧಗಳಿಗೆ ದೇಶ-ವಿದೇಶಗಳಿಂದ ವ್ಯಾಪಕ ಬೇಡಿಕೆ ಇರುವುದರಿಂದ ಘಟಕವನ್ನು ಮತ್ತೆ ಆರಂಭಿಸಲು ಅನುಮತಿ ನೀಡಬೇಕು. ಕಾರ್ಖಾನೆಯಲ್ಲಿ ಜೀವ ರಕ್ಷಕವಾಗಿರುವ ಅಝಿಥ್ರೊಮೈಸಿನ್, ಲೋರ್ಸಾತನ್, ವಲ್ಸತ್ರಾನ್, ಇಬ್ರೆಸ್ರಾತನ್, ಕಾರ್ಬಮಜೆಪೈನ್ ಜತೆಗೆ ಕೋವಿಡ್-19 ಚಿಕಿತ್ಸೆಗೆ ಬಳಸುವ ಅಝಿಥ್ರೊಮೈಸಿನ್ ಡೈಹೈಡ್ರೇಟ್ ಮತ್ತು ಅಝಿಥ್ರೊಮೈಸಿನ್ ಮೊನೊಹೈಡ್ರೇಟ್ ಔಷಧಗಳನ್ನು ತಯಾರಿಸಲಾಗುತ್ತಿದೆ ಎಂದು ಕಂಪನಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!