Tuesday, July 5, 2022

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

Follow Us

newsics.com
ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ.
ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್ ತರಗತಿಗಳ ಮೂಲಕ ಕನ್ನಡವನ್ನು ಕಲಿಯಬಹುದಾಗಿದೆ.
ಕನ್ನಡದಲ್ಲಿ ಶುಭಾಶಯಗಳನ್ನು ಹೇಳುವುದು, ಸಂಭಾಷಣೆ ಮತ್ತು ವಾಕ್ಯ ಸೇರಿದಂತೆ ಕನ್ನಡ ಭಾಷೆಯನ್ನು ಬಳಸಲು ಅಗತ್ಯವಾಗಿರುವ ಶಿಕ್ಷಣವನ್ನು ಇಲ್ಲಿ ನೀಡಲಾಗುತ್ತದೆ. ಅಭ್ಯಾಸ ಪರಿಕರಗಳೂ ಇರಲಿದ್ದು, ಪಠ್ಯಗಳೆಲ್ಲವೂ ಉಚಿತವಾಗಿರಲಿವೆ ಮತ್ತು ಸ್ವಯಂ-ಕಲಿಕೆಗೆಂದೇ ವಿನ್ಯಾಸಗೊಳಿಸಲಾಗಿದೆ.
ಪೋರ್ಟಲ್‌ನಲ್ಲಿ ಮುದ್ರಣ, ಆಡಿಯೋ ಮತ್ತು ವಿಡಿಯೋ ಮಾದರಿಯಲ್ಲಿ ತರಗತಿಗಳು ಮತ್ತು ಪಠ್ಯಗಳಿರುತ್ತವೆ. ekannada.karnataka.gov.in ನಲ್ಲಿ ಹೆಚ್ಚಿನ ಮಾಹಿತಿಗಳು ಲಭ್ಯ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಇ-ಕನ್ನಡ ಕಾರ್ಯಕ್ರಮ ಉದ್ಘಾಟಿಸಿ, ಎಲ್ಲಾ ಆಡಳಿತ ಸಾಫ್ಟ್‌ವೇರ್ ಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಸಂಬಂಧ ಸರ್ಕಾರ ಸದ್ಯದಲ್ಲಿಯೇ ಆದೇಶ ಹೊರಡಿಸಲಿದೆ. ಇದಕ್ಕೆಂದು ಕನ್ನಡದ ಟೆಂಪ್ಲೇಟ್ ಸಿದ್ಧಗೊಳಿಸಲಾಗಿದೆ ಎಂದರು.

ಹೊಸ ದಾಖಲೆ ಬರೆದ ಯಶ್: ಕೆಜಿಎಫ್ ಚಾಪ್ಟರ್ 2 ಗಳಿಕೆ 1200 ಕೋಟಿ ರೂ.

ನಾಳೆ ಮಧ್ಯಾಹ್ನ 12:30ಕ್ಕೆ SSLC ರಿಸಲ್ಟ್

ನಡುರಸ್ತೆಯಲ್ಲೇ ವಿದ್ಯಾರ್ಥಿನಿಯರ ಹೊಡೆದಾಟ, ವಿಡಿಯೋ ವೈರಲ್

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!