Monday, November 29, 2021

ಸಾರಿಗೆ ಬಸ್‌ ಪ್ರಯಾಣ ದರ‌ ಶೇ. 12ರಷ್ಟು ಹೆಚ್ಚಳ; ಮಧ್ಯರಾತ್ರಿಯಿಂದಲೇ ಜಾರಿ

Follow Us

ಬೆಂಗಳೂರು: ಕೆಎಸ್‌ಆರ್‌ಟಿಸಿ, ವಾಯವ್ಯ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳ  ಬಸ್‌ ಪ್ರಯಾಣ ದರವನ್ನು ಶೇ.12ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಮಂಗಳವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಆದರೆ ಬಿಎಂಟಿಸಿ ಬಸ್ ಪ್ರಯಾಣ ದರ ಪರಿಷ್ಕರಣೆ ಮಾಡಲಾಗಿಲ್ಲ.

ಡೀಸೆಲ್‌ ಬೆಲೆ ಏರಿಕೆ, ವಾಹನಗಳ  ಬಿಡಿ ಭಾಗಗಳ ದರ ಏರಿಕೆ, ನಿರ್ವಹಣೆ ವೆಚ್ಚ ಹೆಚ್ಚಳದಿಂದ ಪ್ರಯಾಣ ದರ ಏರಿಕೆ ಮಾಡುವಂತೆ ಬಸ್‌  ಪ್ರಯಾಣ ದರಗಳನ್ನು ಏರಿಕೆ ಮಾಡುವಂತೆ ರಾಜ್ಯದ ಮೂರು ಸಾರಿಗೆ ಸಂಸ್ಥೆಗಳು ಈ ಹಿಂದೆಯೇ  ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಮತ್ತು ವಿಕಲಚೇತನರ ಬಸ್‌ ಪಾಸ್‌ ದರಗಳನ್ನು ಹೆಚ್ಚಳವಾಗಿಲ್ಲ. ಸಾಮಾನ್ಯ ಸಾರಿಗೆಗಳಲ್ಲಿ ಮೊದಲ 3 ಕಿ.ಮೀ.ಗಳವರೆಗೆ ಪ್ರಯಾಣಿಸುವ ಪ್ರಯಾಣಿಕರ ಪ್ರಯಾಣ ದರವನ್ನು 7 ರೂ.ಗಳಿಂದ 5 ರೂ.ಗಳಿಗೆ ನಿಗದಿಪಡಿಸಲಾಗಿದೆ. ಸಾಮಾನ್ಯ ಸಾರಿಗೆಗಳಲ್ಲಿ ಮೊದಲ 12 ಮತ್ತು 15 ಕಿ.ಮೀ. ಪ್ರಯಾಣಿಸುವ ಪ್ರಯಾಣಿಕರ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ವೇತದೂತ ಸಾರಿಗೆಗಳಲ್ಲಿ ಮೊದಲ 6 ಕಿ.ಮೀ.ಪ್ರಯಾಣಿಸುವ ಪ್ರಯಾಣಿಕರ ಪ್ರಯಾಣ ದರ ಹಿಂದಿನಂತೆಯೇ ಎಂದು  ಕೆಎಸ್‌ಆರ್‌ಟಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!