ಬೆಂಗಳೂರು: ರಾಜ್ಯದ ನೆರೆ ಹಾವಳಿಯಲ್ಲಿ ಸಂಪೂರ್ಣ ಹಾಗೂ ಭಾಗಶಃ ಹಾನಿಗೊಳಗಾದ ಮನೆಗಳಿಗೆ ಐದು ಲಕ್ಷ ರೂ. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿತ್ತು. ಇದೀಗ ಭಾಗಶಃ ಹಾನಿಗೊಳಗಾದ ಮನೆಗಳಿಗೆ ನೀಡುವ ಮೊತ್ತವನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.
ಕಳೆದ ವರ್ಷ ಆಗಸ್ಟ್ ನಲ್ಲಿ ಕರ್ನಾಟಕದಲ್ಲಿ ಸುರಿದ ಮಹಾಮಳೆ ಹಾಗೂ ಪ್ರವಾಹಕ್ಕೆ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಸಿಎಂ ಯಡಿಯೂರಪ್ಪ ಶೇ. 75ಕ್ಕಿಂತ ಹೆಚ್ಚಿಗೆ ಹಾಗೂ ಶೇ. 25-75ರಷ್ಟು ಮನೆ ಹಾನಿಯಾದವರಿಗೆ 5 ಲಕ್ಷ ರೂ. ನೀಡಲು ನಿರ್ಧರಿಸಿತ್ತು. ಆದರೆ ಇದೀಗ ಭಾಗಶಃ ಮನೆ ಹಾನಿಯಾದವರ ಪರಿಹಾರ ಮೊತ್ತವನ್ನು ಕಡಿತಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ವಸತಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನೆರೆ ಹಾವಳಿ: ಪರಿಹಾರ ಮೊತ್ತ ಕಡಿತಗೊಳಿಸಲು ಸರ್ಕಾರ ಚಿಂತನೆ!
Follow Us