Monday, November 29, 2021

ಗುತ್ತಿಗೆ ಆಧಾರದಲ್ಲಿ ವೈದ್ಯ ಸಿಬ್ಬಂದಿ ನೇಮಕಕ್ಕೆ ಸರ್ಕಾರ ನಿರ್ಧಾರ

Follow Us

ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ತಕ್ಷಣವೇ ಆಸ್ಪತ್ರೆಗಳಿಗೆ 10 ವೈದ್ಯರು, 20 ಶುಶ್ರೂಷಕರು, 5 ಪ್ರಯೋಗಶಾಲಾ ತಂತ್ರಜ್ಱರು ಮತ್ತು 10 ಗ್ರೂಪ್​ ಡಿ ನೌಕರರು ಸೇರಿ ಒಟ್ಟು 45 ವೈದ್ಯಕೀಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆಗೆ ಸರ್ಕಾರ ಸೂಚಿಸಿದೆ.
ಈ ಸಂಬಂಧ ಸೋಮವಾರ ಆದೇಶ ಹೊರಡಿಸಿದೆ. ಈ ಆದೇಶದಿಂದ ರಾಜ್ಯದ 18 ಆಸ್ಪತ್ರೆಗಳಿಗೆ ಒಟ್ಟು 810 ಸಿಬ್ಬಂದಿ 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಗೊಳ್ಳಲಿದ್ದಾರೆ. ವೈದ್ಯರಿಗೆ ಮಾಸಿಕ 60 ಸಾವಿರ ರೂ., ಶುಶ್ರೂಷಕರಿಗೆ 20 ಸಾವಿರ ರೂ., ಪ್ರಯೋಗಶಾಲಾ ತಂತ್ರಜ್ಱರಿಗೆ 15 ಸಾವಿರ ರೂ. ಮತ್ತು ಗ್ರೂಪ್​ ಡಿ ಸಿಬ್ಬಂದಿಗೆ 12 ಸಾವಿರ ರೂ. ವೇತನ ನಿಗದಿಪಡಿಸಲಾಗಿದೆ.
ಕೊರೊನ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ತುರ್ತು ನಿಗಾ ಘಟಕ (ಐಸಿಯು) ಮತ್ತು ಐಸೋಲೇಷನ್​ ವಾರ್ಡ್​ಗಳಲ್ಲಿ ದಿನದ 24 ಗಂಟೆ ಕೆಲಸ ಮಾಡಲು ವೈದ್ಯಕೀಯ ಸೇವೆಗಳ ಸಿಬ್ಬಂದಿಯ ಅವಶ್ಯಕತೆ ಇದೆ. ಪ್ರತಿ ಪಾಳಿಯಲ್ಲೂ ಕನಿಷ್ಠ 10 ಸಿಬ್ಬಂದಿಯ ಅವಶ್ಯಕತೆಯಿದೆ. ಆದರೆ ಆರೋಗ್ಯ ಇಲಾಖೆಯಲ್ಲಿ ಶೇ.30 ಹುದ್ದೆಗಳು ಖಾಲಿ ಇವೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!