Monday, October 3, 2022

ಮೈಸೂರು ಅನಂತಸ್ವಾಮಿ ಸಂಯೋಜನೆಯ ದಾಟಿಯಲ್ಲೇ ನಾಡಗೀತೆ ಹಾಡಲು ಸರ್ಕಾರ ಸಮ್ಮತಿ

Follow Us

newsics.com

ಬೆಂಗಳೂರು: ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಯ ಒಂದಕ್ಷರವನ್ನೂ ಬಿಡದಂತೆ ಹಾಡುವುದಕ್ಕೆ ರಾಜ್ಯ ಸರ್ಕಾರ ಸಮ್ಮತಿಸಿದೆ.

ಪ್ರಸಿದ್ಧ ರಾಗ ಸಂಯೋಜಕ ದಿ.ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ದಾಟಿಯಲ್ಲಿ ನಾಡಗೀತೆ ಹಾಡುವಂತೆ ಸರ್ಕಾರ ಹೇಳಿದೆ. ತಜ್ಞರ ವರದಿ ಆಧರಿಸಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಲ್ಲಿಸಿದ್ದ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

ನಾಡಗೀತೆಯಾಗಿ ಅಂಗೀಕೃತಗೊಂಡ ರೂಪದಲ್ಲೇ ಜಯ ಭಾರತ ಜನನಿಯ ತನುಜಾತೆ ಹಾಡಿನ ಒಂದಕ್ಷರವನ್ನೂ ಬಿಡದಂತೆ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ಮಾಡಿದ ದಾಟಿಯಲ್ಲೇ ಹಾಡಲಾಗುತ್ತದೆ ಎಂದು ಕನ್ನಡ – ಇಂಧನ ಮತ್ತು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ 2005 ರಿಂದಲೂ ನನೆಗುದಿಗೆ ಬಿದ್ದಿತ್ತು. 2006 ರಲ್ಲಿ ಸಾಹಿತಿ ವಸಂತ ಕನಕಾಪುರೆ ನೇತೃತ್ವದಲ್ಲಿ ಸರ್ಕಾರ ಸಮಿತಿ ರಚಿಸಿತ್ತು. ಅವರ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಅಧ್ಯಕ್ಷತೆಯಲ್ಲಿ ಸರ್ಕಾರ ಮತ್ತೊಂದು ಸಮಿತಿ ರಚಿಸಿತ್ತು. ಬಳಿಕ ಹಿರಿಯ ಸಂಗೀತ ವಿದುಷಿ ಎಚ್.ಆರ್.ಲೀಲಾವತಿ ಅಧ್ಯಕ್ಷತೆಯಲ್ಲಿ ಹದಿನೆಂಟು ಜನರ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಎರಡು ನಿಮಿಷ ಮೂವತ್ತು ಸೆಕೆಂಡ್ ಗಳಲ್ಲಿ ನಾಡಗೀತೆ ಹಾಡಬೇಕೆಂದು ನೀಡಿದ್ದ ಶಿಫಾರಸು ಇದೀಗ ಅಧಿಕೃತಗೊಂಡಿದೆ.

ಲೋಕಾಯುಕ್ತದಲ್ಲಿ ಎಫ್ ಐ ಆರ್ : ಯಡಿಯೂರಪ್ಪ ವಿರುದ್ಧ ತನಿಖೆಗೆ ಸುಪ್ರೀಂ ಮಧ್ಯಂತರ ತಡೆ

ಆರ್ ಎಸ್ ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ, ಹಲವೆಡೆ ಹಿಂಸಾಚಾರ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!