NEWSICS.COM
ಬೆಂಗಳೂರು: ರಾಜ್ಯದಲ್ಲಿ ಇಂದು ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಆರಂಭಗೊಂಡಿದೆ.
ಇದು ಕೊನೆಯ ಹಂತದ ಮತದಾನವಾಗಿದ್ದು,ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. 2,709 ಗ್ರಾಮ ಪಂಚಾಯತ್’ಗಳಲ್ಲಿ ಮತದಾನ ನಡೆಯುತ್ತಿದ್ದು, 1.05 ಲಕ್ಷಕ್ಕೂ ಹೆಚ್ಚು ಮಂದಿ ಸ್ಪರ್ಧಿಗಳಿದ್ದಾರೆ. ಒಟ್ಟು 39,378 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
ಕೊನೆಯ ಒಂದು ಗಂಟೆ ಅವಧಿಯಲ್ಲಿ ಕೊರೋನಾ ಸೋಂಕಿತರು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಎಲ್ಲ ಗ್ರಾಮ ಪಂಚಾಯಿತ್’ಗಳ ಚುನಾವಣಾ ಫಲಿತಾಂಶ ಡಿ.30ರಂದು ಹೊರಬೀಳಲಿದೆ.
ಡಿ. 22ರಂದು ಮೊದಲ ಹಂತದ ಚುನಾವಣೆ ನಡೆದಿತ್ತು.