ಬೆಂಗಳೂರು: ರಾಜ್ಯಕ್ಕೆ ಅನುದಾನ ಕಡಿತಗೊಳಿಸಿರುವ ಕ್ರಮದಿಂದ ಅಸಮಾಧಾನಗೊಂಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
2019-20ನೇ ಸಾಲಿನಲ್ಲಿ ಕೇಂದ್ರ ನೀಡಬೇಕಾಗಿದ್ದ ಮೊತ್ತದಲ್ಲಿ 17 ಸಾವಿರ ಕೋಟಿ ರೂ. ಕೊರತೆಯಾಗಲಿದೆ. ಅನುದಾನ ಹಂಚಿಕೆ ಲೆಕ್ಕದಲ್ಲಿ 8,813 ಕೋಟಿ ಕೈತಪ್ಪುವುದು ಖಚಿತ ಎನ್ನಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಅನುದಾನ ಕಡಿತ ಮಾಡದಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಅನುದಾನ ಕಡಿತ ಬೇಡವೆಂದು ಕೇಂದ್ರಕ್ಕೆ ಸಿಎಂ ಪತ್ರ
Follow Us