newsics.com
ಬೆಂಗಳೂರು: ಕೇಂದ್ರ ಸರ್ಕಾರದಿಂದ ಜಿಎಸ್‌ಟಿ ಕಡಿತದ ಹಿನ್ನೆಲೆಯಲ್ಲಿ 33 ಸಾವಿರ ಕೋಟಿ ರೂ. ಸಾಲ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮಂಗಳವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದಕ್ಕಾಗಿ ವಿತ್ತೀಯ ಹೊಣೆಗಾರಿಕೆ ಕಾಯಿದೆಯ ಸೆಕ್ಷನ್ 4ಕ್ಕೆ ತಿದ್ದುಪಡಿ ತರಲು ತೀರ್ಮಾನ ಮಾಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು ಅದರಂತೆ ಜಿಡಿಪಿಯ ಶೇಕಡಾ 5ರಷ್ಟು ಅಂದರೆ ಸುಮಾರು 36 ಸಾವಿರ ಕೋಟಿ ರೂ. ಸಾಲ ಪಡೆಯಬಹುದಾಗಿದೆ. ಆದರೆ ರಾಜ್ಯ ಸರ್ಕಾರ 33 ಸಾವಿರ ಕೋಟಿ ರೂ. ಸಾಲ ಮಾಡಲು ತೀರ್ಮಾನ ಮಾಡಿದೆ ಎಂದರು. ಜಿಎಸ್‌ಟಿಯಿಂದ 11 ಸಾವಿರ ಕೋಟಿ ರೂಪಾಯಿಗಳಿಗೆ ನಾವು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದೇವೆ ಎಂದು ಮಾಧುಸ್ವಾಮಿ ಮಾಹಿತಿ ನೀಡಿದರು.
ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ