Tuesday, April 13, 2021

ಕೊರೋನಾ ಭೀತಿ: ಪೊಲೀಸರ ಕರ್ತವ್ಯ ನಿರ್ವಹಣೆಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು:  ರಾಜ್ಯದಲ್ಲಿ ಮಾರಕ ಕೊರೋನಾ ಸೋಂಕಿಗೆ ಪೊಲೀಸರು ಕೂಡ ತುತ್ತಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸೂಚನೆ ಮೇರೆಗೆ ಹೊಸ ಮಾರ್ಗ ಸೂಚಿ  ಬಿಡುಗಡೆ ಮಾಡಲಾಗಿದೆ. ಪೊಲೀಸ್ ಸಿಬ್ಬಂದಿ ಆರೋಗ್ಯ ಖಾತರಿಪಡಿಸುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಠಾಣೆಯಲ್ಲಿ ಕರ್ತವ್ಯ ನಿರ್ವಹಣೆ, ತನಿಖಾ ಪ್ರಕ್ರಿಯೆ, ನ್ಯಾಯಾಲಯ ಡ್ಯೂಟಿ ಮತ್ತು ಇತರ ಸಂದರ್ಭಗಳಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆಗಳನ್ನು ಇದು ಒಳಗೊಂಡಿದೆ. ರಾಜ್ಯದ ಹಲವು ಪೊಲೀಸರಿಗೆ ಕೊರೋನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಕೆಲವು ಪೊಲೀಸ್ ಠಾಣೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆ ಸೇರಿದಂತೆ ಹಲವು ಠಾಣೆಗಳಲ್ಲಿ ಕಚೇರಿ ನಿರ್ವಹಣೆಗೆ ಇದರಿಂದ ಅಡ್ಡಿಯಾಗಿತ್ತು

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!