Saturday, November 26, 2022

ಜುಲೈನಲ್ಲಿ SSLC ಪರೀಕ್ಷೆ: ಮಾರ್ಗಸೂಚಿ ಬಿಡುಗಡೆ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಜುಲೈ 3ನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸಿದ್ಧತೆ ಆರಂಭವಾಗಿದೆ.
ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಪರೀಕ್ಷೆಯಲ್ಲಿ ಭಾಗವಹಿಸುವ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ‌ಕಡ್ಡಾಯ ಲಸಿಕೆ ಪಡೆದುಕೊಂಡಿರಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ಹೊರಡಿಸಿದೆ.
ಪರೀಕ್ಷಾ ಕೇಂದ್ರದ ಎಲ್ಲಾ ಕಡೆ ಸ್ಯಾನಿಟೈಸ್ ಮಾಡಬೇಕು,
ಒಂದು ಪರೀಕ್ಷಾ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಗಳನ್ನು ಮಾತ್ರ ಕೂರಿಸಬೇಕು. ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳು ತಾಲೂಕು ಕೇಂದ್ರಕ್ಕೆ ಹೋಗದಂತೆ ಪರೀಕ್ಷಾ ಕೇಂದ್ರ ರಚಿಸಬೇಕು.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನೀರಿನ ಬಾಟಲಿ ತರಲು ಅವಕಾಶ ನೀಡಬೇಕು. ವಿದ್ಯಾರ್ಥಿಗಳ ಬೇಡಿಕೆ ಇದ್ದರೆ ಆಹಾರದ ಡಬ್ಬಿಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯಲು ಅವಕಾಶ ನೀಡಬೇಕು. ಕೆಮ್ಮ,ನೆಗಡಿ, ಜ್ವರ ಮೊದಲಾದವುಗಳಿಂದ ಬಳಲುತ್ತಿರುವ ಅಥವಾ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕನಿಷ್ಠ ಎರಡು ಕೊಠಡಿಗಳನ್ನು ವಿಶೇಷ ಕೊಠಿಗಳೆಂದು ಹೆಸರಿಸಿ ಕಾಯ್ದಿರಿಸಬೇಕು.
ಹಾಗೂ ಇನ್ನುಳಿದ ಕೊರೋನಾ ನಿಯಮಗಳಾದ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ. ಜತೆಗೆ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಬೇಕು ಎಂದು ಸೂಚಿಸಲಾಗಿದೆ.

 

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!