Friday, January 27, 2023

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

Follow Us

newsics.com

ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಗುಜರಾತ್ ಚುನಾವಣೆಗೆ ಮುನ್ನ ಬಿಜೆಪಿ ಕೆಲವು ದಿಟ್ಟ ತೀರ್ಮಾನಗಳನ್ನು ತೆಗೆದುಕೊಂಡಿತ್ತು. 42  ಹಾಲಿ ಶಾಸಕರಿಗೆ ಟಿಕೇಟ್ ನಿರಾಕರಿಸಿತ್ತು. ಇದರಲ್ಲಿ ಸಚಿವರು ಕೂಡ ಸೇರಿದ್ದರು.

ರಾಜ್ಯದ ಪ್ರಬಲ ಸಮುದಾಯವಾಗಿರುವ ಪಾಟೀದಾರ್ ಸಮುದಾಯದ ಹಿರಿಯ ನಾಯಕರನ್ನು  ಪಕ್ಷಕ್ಕೆ ಸೇರಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಇದರ ಜತೆ ಜತೆಗೆ ಸಮಾಜದ ಅತೀ ಚಿಕ್ಕ ಜಾತಿಗಳನ್ನು ಗುರಿಯಾಗಿರಿಸಿಕೊಂಡು ಕಾರ್ಯಾಚರಣೆ ನಡೆಸಿತ್ತು.

ಈ ಹಿನ್ನೆಲೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ ಅನುಸರಿಸಲಿರುವ ರಣತಂತ್ರ ಇದೀಗ ಕುತೂಹಲ ಕೆರಳಿಸಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಮಾತು ಕೂಡ ಕೇಳಿ ಬರುತ್ತಿದೆ. ಇದನ್ನು ತಳ್ಳಿಹಾಕುವಂತಿಲ್ಲ.

ಮುಂದಿನ ವಾರ ರಾಜ್ಯ ರಾಜಕೀಯದಲ್ಲಿ ನಿರ್ಣಾಯಕ ಬದಲಾವಣೆ ನಡೆಯುವ ಸಾಧ್ಯತೆಯಿದೆ. ಇದೇ ವೇಳೆ ಗುಜರಾತ್ ಫಲಿತಾಂಶ ಕಾಂಗ್ರೆಸ್ ಪಾಳಯದಲ್ಲಿ ಕೂಡ ತಲ್ಲಣ ಮೂಡಿಸಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹಿಂದೂ ವಿರೋಧಿ ಪಕ್ಷವಲ್ಲ ಎಂಬುದುನ್ನು  ಸಾಬೀತುಪಡಿಸಲು ಕಾಂಗ್ರೆಸ್ ನಾಯಕರು  ಹೆಚ್ಚಿನ ಶ್ರಮ ವಹಿಸಲಿದ್ದಾರೆ. ಇದರ ಜತೆಗೆ ತಳಮಟ್ಟದಲ್ಲಿ ಪಕ್ಷ ಸಂಘಟಿಸಲು ಕಾಂಗ್ರೆಸ್ ಗಮನ ಹರಿಸಲಿದೆ

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!