Tuesday, January 26, 2021

ನಾಳೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಧ್ಯಾಹ್ನದ ಬಳಿಕ ಲಾಕ್ ಡೌನ್

ಶಿವಮೊಗ್ಗ: ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜುಲೈ 16ರಿಂದ ಅರ್ಧ ದಿನ ಲಾಕ್ ಡೌನ್ ಘೋಷಿಸಲಾಗಿದೆ.
ಮುಂದಿನ ಆದೇಶದವರೆಗೆ ಮಧ್ಯಾಹ್ನ 2ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಭೀಕರ ಅಪಘಾತ; ನಾಲ್ವರ ಸಜೀವ ದಹನ

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟಿಸಿದರು.
ಪೆಟ್ರೋಲ್ ಬಂಕ್‍ಗಳು, ಮದ್ಯದ ಅಂಗಡಿಗಳು, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2ಗಂಟೆವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧವಿಲ್ಲ. ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶವಿಲ್ಲ. ಎಲ್ಲಾ ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸಬಹುದಾಗಿದೆ.

ಮಾರಕ ಕೊರೋನಾಕ್ಕೆ ಮತ್ತೊಬ್ಬಎಎಸ್ಐ ಬಲಿ

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪುಗೂಡುವುದು, ಮಾಸ್ಕ್ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಈಶ್ವರಪ್ಪ ಹೇಳಿದರು.

ಮತ್ತಷ್ಟು ಸುದ್ದಿಗಳು

Latest News

ದೆಹಲಿಯಲ್ಲಿ ರೈತರ ಮೇಲೆ ಅಶ್ರುವಾಯು ಬಳಕೆ

Newsics.com ನವದೆಹಲಿ: ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ ರಾಜಧಾನಿ ದೆಹಲಿ ಪ್ರವೇಶಿಸಲು ಯತ್ನಿಸಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಅಶ್ರುವಾಯು ಬಳಸಿದ್ದಾರೆ. ಆರಂಭದಲ್ಲಿ ಸಿಂಘಗಡಿಯಲ್ಲಿ ಪೊಲೀಸರ ಬ್ಯಾರಿಕೇಡ್ ಮುರಿದು ಒಳನುಗ್ಗಲು ಪ್ರತಿಭಟನಾಕಾರರು...

ಹಣಕ್ಕೆ ಬೇಡಿಕೆ ಆರೋಪ: ಸಚಿವ ಅಶೋಕ್ ಪಿ ಎ ವಿರುದ್ಧ ದೂರು ದಾಖಲು

Newsics.com ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಗಾಧರ್ ಅವರು ಹಣಕ್ಕೆ ಬೇಡಿಕೆ ಇರಿಸಿದ್ದರು ಎಂದು  ಸಬ್ ರಿಜಿಸ್ಟಾರ್ ಚಲುವರಾಜ್...

ಒಂದೇ ದಿನ 9102 ಜನರಿಗೆ ಕೊರೋನಾ ಸೋಂಕು,117 ಮಂದಿ ಸಾವು

Newsics com ನವದೆಹಲಿ: ದೇಶದಲ್ಲಿ ಕೊರೋನಾದ  ಅಬ್ಬರ ಇಳಿಮುಖವಾಗುತ್ತಿದೆ.ಕಳೆದ  24 ಗಂಟೆಯಲ್ಲಿ  9,102 ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದೆ.  ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.76,838 ಕ್ಕೆ ತಲುಪಿದೆ.    ಕಳೆದ 24 ಗಂಟೆಯಲ್ಲಿ ಕೊರೋನಾ...
- Advertisement -
error: Content is protected !!