newsics.com
ಕಾರವಾರ: ವಿಕಲಚೇತನನೋರ್ವ ಕಿಟಕಿಗೆ ಟವಲ್ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಘಟನೆ ನಡೆದಿದೆ.ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್ (42)ಎನ್ನುವ ಯುವಕ ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಕಾರವಾರ ಮೂಲದ ಈತನನ್ನು ಜ.6ರಂದು ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು ಎನ್ನಲಾಗಿದೆ.