Newsics.com
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಪ್ರಸಿದ್ದ ಹಾಸನಾಂಬೆ ದೇವಸ್ಥಾನದ ಬಾಗಿಲು ಇಂದು ತೆರೆಯಲಿದೆ. ಕೊರೋನಾ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಗಣ್ಯ ವ್ಯಕ್ತಿಗಳಿಗೆ ಮಾತ್ರ ದರ್ಶನಕ್ಕೆ ಅನುಮತಿ ನೀಡಲಾಗಿದೆ.
ಹಾಸನದಲ್ಲಿರುವ ಈ ದೇವಸ್ಥಾನ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿದೆ. ವರ್ಷಕ್ಕೊಮ್ಮೆ ಬಾಗಿಲು ತೆರೆಯುವುದು ಈ ದೇವಸ್ಥಾನದ ವಿಶೇಷತೆ. ಇದೇ ವೇಳೆ ಕೊರೋನಾ ಕಾರಣ ಹೇಳಿ ಭಕ್ತರಿಗೆ ಪ್ರವೇಶ ನಿರಾಕರಿಸಿರುವ ಜಿಲ್ಲಾಡಳಿತ ಕ್ರಮವನ್ನು ಮಾಜಿ ಸಚಿವ ಹೆಚ್ ಡಿ ರೇವಣ್ಣ ಟೀಕಿಸಿದ್ದಾರೆ.
ಜನಪ್ರತಿನಿಧಿಗಳ ಜತೆ ಸಮಾಲೋಚಿಸದೆ ಜಿಲ್ಲಾಡಳಿತ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.