ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾದರಿಯಲ್ಲೇ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯ್ತಿ ಮತ್ತು ಎಲ್ಲ ನಗರ ಸ್ಥಳೀಯ ಸಂಸ್ಥೆಗಳೂ ಕೂಡ ಅಕ್ರಮ ಜಾಹೀರಾತುಗಳನ್ನು ನಿಷೇಧಿಸಲು ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಅಕ್ರಮ ಜಾಹೀರಾತುಗಳ ತೆರವು ಕೋರಿ ಸಾಯಿದತ್ತ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಗುರುವಾರ ಈ ಆದೇಶ ನೀಡಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆ 1993 ಸೆಕ್ಷನ್ 316(3) ಅನ್ವಯ ಎಲ್ಲ ಪಂಚಾಯ್ತಿಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಈ ಸಂಬಂಧ ನಿರ್ದೇಶನಗಳನ್ನು ನೀಡಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.
ತಾಲೂಕು, ಗ್ರಾಮ ಪಂಚಾಯ್ತಿಗಳಲ್ಲೂ ಅನಧಿಕೃತ ಜಾಹೀರಾತು ನಿಷೇಧಿಸಿ; ಹೈಕೋರ್ಟ್ ಆದೇಶ
Follow Us