newsics.com
ಶಿವಮೊಗ್ಗ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಶಿವಮೋಗ್ಗ ಜಿಲ್ಲೆಯಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ.
ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮಾಲತಿ ಮತ್ತು ಸೀತಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ಹಲವು ಕಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಶಿವಮೊಗ್ಗ, ಆಗುಂಬೆ, ಮಂಗಳೂರು ಎನ್ ಹೆಚ್ 169 ರಸ್ತೆಯನ್ನು ಆಗುಂಬೆಯ ಸೋಮೇಶ್ವರದ ಬಳಿ ಬಂದ್ ಮಾಡಲಾಗಿದೆ.
ಉಡುಪಿಯಲ್ಲಿ ಮಳೆ ಅಬ್ಬರ, 700 ಮನೆ ಮುಳುಗಡೆ, 2500 ಸಂತ್ರಸ್ತರ ರಕ್ಷಣೆ
ಬೆಂಗಳೂರು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ; ಜನಜೀವನ ಅಸ್ತವ್ಯಸ್ತ