newsics.com
ಉಡುಪಿ: ಉಡುಪಿ-ಮಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ನಾಳೆ (ಸೆ.21) ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮುಂಡೂಡಲಾಗಿದೆ.
ಉಭಯ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ನೆರೆ ಸೃಷ್ಟಿಯಾಗಿದೆ. ನಗರದಲ್ಲಿ ನೂರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಭಾರೀ ಮಳೆಗೆ ಮಲ್ಪೆಯಲ್ಲಿ ಮೂರು ಬೋಟ್ ಗಳು ಮುಳುಗಡೆಯಾಗಿವೆ. ಮೀನುಗಾರರು ಕಲ್ಲುಬಂಡೆಗಳ ಮೇಲೆ ಆಶ್ರಯ ಪಡೆದು ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿ-ಮಂಗಳೂರಿನಲ್ಲೂ ಮಳೆ ಆರ್ಭಟ ಮುಂದುವರೆದಿದ್ದು, ನಾಳೆಯ ಮಂಗಳೂರು ವಿವಿ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸೆ. 21ರ ಸೋಮವಾರ ನಿಗದಿಯಾಗಿದ್ದ ಪರೀಕ್ಷೆಗಳು ಮಾತ್ರ ಮುಂದೂಡಿಕೆಯಾಗಿದ್ದು, ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲಿ ನಿಗದಿಪಡಿಸಲಾಗುವುದು. ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ಭಾರೀ ಮಳೆ ಹಿನ್ನೆಲೆ; ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
Follow Us