Saturday, April 17, 2021

ಕರಾವಳಿ, ಮಲೆನಾಡಿನಲ್ಲಿ ಉತ್ತಮ ಮಳೆ: ಭರ್ತಿಯಾದ ತುಂಗಾ ಜಲಾಶಯ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರವಾರ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದೆ. ಕಾರವಾರದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕುಮಟಾದಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಈ ಮಧ್ಯೆ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆ ಮುಂದುವರಿದಿದ್ದು, ದೂಧ್ ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಚಿಕ್ಕೋಡಿಯ ಎರಡು ಪ್ರಮುಖ ಸೇತುವೆಗಳು ನೀರಿನಲ್ಲಿ ಮುಳುಗಿವೆ. ಪ್ರಸಿದ್ಧ ಬಂಗಾಲಿ ಬಾಬಾ ದೇವಸ್ಥಾನ ಜಲಾವೃತಗೊಂಡಿದೆ. ನಿಪ್ಪಾಣಿಯಲ್ಲಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿರುವ ತುಂಗಾ ಜಲಾಶಯ ಭರ್ತಿಯಾಗಿದ್ದು, ದಾವಣಗೆರೆ, ಶಿವಮೊಗ್ಗ ಮತ್ತು ಹಾವೇರಿ ಜಿಲ್ಲೆಯ ರೈತರಲ್ಲಿ ಸಂತಸ ಮೂಡಿಸಿದೆ. ಶೃಂಗೇರಿ, ತೀರ್ಥಹಳ್ಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿಯಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಚಾಮುಂಡೇಶ್ವರಿ ನಗರದಲ್ಲಿ ಗುಡ್ಡ ಕುಸಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!