Wednesday, July 6, 2022

ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ, ಮಲೆನಾಡಿನಲ್ಲಿ ಆತಂಕ

Follow Us

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಕರ್ನಾಟಕ ಮತ್ತು ಮಲೆ ನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೀವನದಿ ನೇತ್ರಾವತಿ ತುಂಬಿ ಹರಿಯುತ್ತಿದೆ. ಬಂಟ್ವಾಳ ಮಾರುಕಟ್ಟೆಗೆ ನೀರು ನುಗ್ಗಿದೆ. ಇದು ಆತಂಕ ಸೃಷ್ಟಿಸಿದೆ. ಬೆಳ್ತಂಗಡಿಯ ದಿಡುಪೆಯಲ್ಲಿ ಕೂಡ ಪ್ರವಾಹದ ಭೀತಿ ಎದುರಾಗಿದೆ.

ಸಕಲೇಶಪುರದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ.ಚಿಕ್ಕಮಗಳೂರಿನ ಕಳಸ ಸಮೀಪದ ಹೆಬ್ಬಾಳೆ ಸೇತುವೆ ನೀರಿನಲ್ಲಿ ಮುಳುಗಿದೆ. ಬೆಳಗಾವಿಯಲ್ಲಿ ಭಾರೀ ಮಳೆಯಾಗುತ್ತಿದೆ. ಬೆಳಗಾವಿ ಹೊರವಲಯದಲ್ಲಿರುವ ಬಳ್ಳಾರಿ ನಾಲಾ ತುಂಬಿ ಹರಿಯುತ್ತಿದೆ.

ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ  ಕೃಷ್ಣಾ ಮತ್ತು ಅದರ ಉಪ ನದಿಗಳು ತುಂಬಿ ಹರಿಯುತ್ತಿವೆ.

ಇದೇ ವೇಳೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಕೆ ಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಾಗಿದೆ. 67, 817 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಕಪಿಲಾ ನದಿ ಕೂಡ ಅಪಾಯ ಮಟ್ಟ ಮೀರಿ ಹರಿಯುತ್ತಿದೆ

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!