Monday, August 8, 2022

ರಾಜ್ಯದಲ್ಲಿ ಮಳೆಯ ಅಬ್ಬರ: ಉತ್ತರ ಕನ್ನಡ, ಉಡುಪಿಯಲ್ಲಿ ಶಾಲೆಗೆ ರಜೆ

Follow Us

newsics.com

ಉಡುಪಿ: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದೆ. ಕರಾವಳಿ ಜಿಲ್ಲೆಗಳು ಮತ್ತು ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಚಿಕ್ಕಮಗಳೂರಿನಲ್ಲಿ ಕೂಡ ಮಳೆಯ ಅಬ್ಬರ ಮುಂದುವರಿದಿದೆ.

ಕೊಡಗಿನ ಮೊಣ್ಣಂಗೇರಿಯಲ್ಲಿ  ಕಿರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.

ಸತತವಾಗಿ ಮಳೆಯಾಗುತ್ತಿರುವ ಕಾರಣ ಉತ್ತರ ಕನ್ನಡದಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಉಡುಪಿಯಲ್ಲಿ ಮಳೆ ಕಾರಣ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಶಾಲೆ ಆರಂಭವಾಗುವ ಅರ್ಧ ಗಂಟೆ ಮೊದಲು ರಜೆ ಘೋಷಿಸಲಾಗಿದೆ. ಇದರಿಂದ ದೂರದ ಸ್ಥಳಗಳಿಂದ ಶಾಲೆಗ ಬಂದ  ಮಕ್ಕಳು ಸಂಕಷ್ಟ ಎದುರಿಸಬೇಕಾಯಿತು.

ಕೊನೆ ಕ್ಷಣದ ತನಕ ಯಾಕೆ ಕಾಯಬೇಕಾಯಿತು ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ಮಗಳ ಹತ್ಯೆಗೆ ಸ್ಕೆಚ್: ಮಾಜಿ ಶಾಸಕ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!