Wednesday, July 6, 2022

ರಾಜ್ಯದಲ್ಲಿ ಮಳೆಯ ಅಬ್ಬರ, ಕೊಡಗಿನಲ್ಲಿ ಮತ್ತೆ ಭೂ ಕುಸಿತ

Follow Us

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕರವಾಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಕೊಡಗಿನಲ್ಲಿ ಮಳೆಯಿಂದ ಭಾರೀ ಹಾನಿ ಸಂಭವಿಸಿದೆ. ಹಲವೆಡೆ ಭೂ ಕುಸಿತ ಸಂಭವಿಸಿದೆ. ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.

ಅಭಿಯಾಲ ಬಳಿ ಭೂ ಕುಸಿತ ಸಂಭವಿಸಿದೆ. ತ್ರಿವೇಣಿ ಸಂಗಮ ಭರ್ತಿಯಾಗಿದೆ.  ಮಡಿಕೇರಿ – ಸಿದ್ದಾಪುರ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.  ಮೈಸೂರಿನ ಹುಣಸೂರಿನಲ್ಲಿ ಭಾರೀ ಮಳೆಯಾಗಿದೆ. ಗದಗ ದಲ್ಲಿ ಕೂಡ ಮಳೆ ಮುಂದುವರಿದಿದೆ.  ನರಗುಂದ- ರೋಣದಲ್ಲಿ ಉತ್ತಮ ಮಳೆಯಾಗಿದೆ.

ಮಲೆನಾಡು ಶಿವಮೊಗ್ಗದಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.  ಹೊಸನಗರದಲ್ಲಿ  ಭಾರೀ ಮಳೆ ಸುರಿದಿದೆ.  ಕಪಿಲಾ ನದಿ ತುಂಬಿ ಹರಿಯುತ್ತಿದೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಎಲ್ಲ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಈ ಮಧ್ಯೆ ಪರಿಹಾರ ಕಾರ್ಯಾಚರಣೆಗಾಗಿ ತಕ್ಷಣ 50 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯ ಕಾರ್ಯದರ್ಶಿ ಅವರಿಗೆ ಆದೇಶ ನೀಡಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!