newsics.com
ಬೆಂಗಳೂರು: ನಗರದಾದ್ಯಂತ ಮಂಗಳವಾರ ಮಧ್ಯಾಹ್ನದಿಂದ ರಾತ್ರಿಯವರೆಗೆ ಬಿಟ್ಟು ಬಿಡದೇ ಬಾರೀ ಮಳೆ ಸುರಿದಿದೆ. ಸೋಮವಾರ ರಾತ್ರಿಯೂ ಉತ್ತಮ ಮಳೆಯಾಗಿತ್ತು.
ಮಂಗಳವಾರ ಎಡೆಬಿಡದೆ ಸುರಿದ ಮಳೆಯಿಂದಾಗಿ ನಗರದ ಜನಜೀವನ ಅಸ್ತವ್ಯಸ್ತವಾಗಿದೆ. ಟ್ರಾಫಿಕ್ ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು.
ಮೆಜೆಸ್ಟಿಕ್, ನಾಗರಬಾವಿ, ಶಾಂತಿನಗರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜಪೇಟೆ, ಶ್ರೀರಾಂಪುರ, ರಾಜಾಜಿನಗರ, ಆರ್ ಆರ್ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಅಬ್ಬರದ ಮಳೆಗೆ ಬಹುತೇಕ ರಸ್ತೆಗಳು ಜಲಾವೃತವಾಗಿದ್ದವು. ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಮಲೆನಾಡು, ಕರಾವಳಿಯಲ್ಲಿ ಕಳೆದೊಂದು ವಾರದಿಂದ ಕಡಿಮೆಯಾಗಿದ್ದ ಮಳೆ ನಾಳೆಯಿಂದ (ಸೆ.30) ಮತ್ತೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 1 ರಿಂದ 3ರವರೆಗೆ ಸಾಧಾರಣ ಮಳೆಯಾಗಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಬೆಂಗಳೂರು, ಕೋಲಾರ, ಬಳ್ಳಾರಿಯಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿಕ್ಷಣ ಇಲಾಖೆಗೆ ಹೊಸ ಆಯುಕ್ತರ ನೇಮಕ
ಮುಗ್ಗರಿಸಿದ ಡೆಲ್ಲಿ ಕ್ಯಾಪಿಟಲ್ಸ್; ಸನ್ ರೈಸರ್ಸ್’ಗೆ ಜಯ
ವಿಕ್ರಮ ಬೇತಾಳ ಕಲಾವಿದ ಇನ್ನಿಲ್ಲ
ದೇಶದ ಜನರಿಗೆ ಕೊರೋನಾ ಲಸಿಕೆ ಹಂಚಲು 80,000 ಕೋಟಿ ರೂ. ಬೇಕಾಗಿಲ್ಲ- ಕೇಂದ್ರ ಸ್ಪಷ್ಟನೆ