newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 11 ಮತ್ತು 12 ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಬಲವಾದ ಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
ಇಂದು ಕೂಡ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮಂತ್ರಿ ಮಾಲ್ ಸಮೀಪ ನೀರು ನಿಂತಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಈ ಮಧ್ಯೆ ಶುಕ್ರವಾರದ ಭಾರಿ ಮಳೆಗೆ ತತ್ತರಿಸಿದ್ದ ಹೈದರಾಬಾದ್ ನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ವನಸ್ಥಲಿಪುರಂ ಪ್ರದೇಶದಲ್ಲಿ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ವರದಿಯಾಗಿದೆ. ಶೋಧ ಕಾರ್ಯ ಮುಂದುವರಿದಿದೆ