newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೆ ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.
ಮೃತಪಟ್ಟವರನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಮನೆಗೆ ನುಗ್ಗಿದ ನೀರನ್ನು ಹೊರ ಹಾಕಲು ಯತ್ನಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ನಿಂದ ವೆಂಕಟೇಶ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೂರು ಗಂಟೆಗಳಿಗಿಂತ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲು ಪ್ರಯಾಣಿಕರು ಹರ ಸಾಹಸ ಪಡಬೇಕಾಯಿತು.