newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಇದು ಶುಭ ಕಾರ್ಯಗಳು ಹೆಚ್ಚಾಗಿ ಆಯೋಜಿಸಲಾಗಿದ್ದು, ಇದರಲ್ಲಿ ಭಾಗವಹಿಸಲು ಸಾಧ್ಯವಾಗದೆ ಜನರು ತೊಂದರೆಗೆ ಸಿಲುಕಿದ್ದಾರೆ.
ಮಲ್ಲೇಶ್ವರಂ, ಶೇಷಾದ್ರಿಪುರಂ, ಸೇರಿದಂತೆ ನಗರದ ಬಹುತೇಕ ಕಡೆ ಉತ್ತಮ ಮಳೆಯಾಗುತ್ತಿದೆ ಎಂದು ವರದಿಯಾಗಿದೆ.
ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಉತ್ತಮ ಮಳೆಯಾಗುತ್ತಿದೆ.