newsics.com
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಮಲೆನಾಡು, ಕರಾವಳಿ, ಕೊಡಗು, ಮಂಡ್ಯ, ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರ ಮೋಡ ಕವಿದ ವಾತಾವರಣವಿದ್ದು, ಮಳೆ ಸುರಿಯುವ ನಿರೀಕ್ಷೆಯಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳ ಕೆಲವು ಭಾಗದಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ.
ಅಸ್ಸಾಂ, ಮೇಘಾಲಯ, ಉತ್ತರಾಖಂಡ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಉತ್ತರ ಪ್ರದೇಶ, ತ್ರಿಪುರ, ಪುದುಚೇರಿ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಗೋವಾ, ಕಾರೈಕಲ್, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ಗಢ, ಒಡಿಶಾ, ಸಿಕ್ಕಿಂನಲ್ಲಿ ಇಂದು ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
37ನೇ ವಯಸ್ಸಿನಲ್ಲಿ ಅಂಡಾಣು ಸಂರಕ್ಷಿಸಿ 40ರಲ್ಲಿ ತಾಯಿಯಾದ ನಿಧಿ ಪರ್ಮಾರ್