ರಾಯಚೂರು: ರಾಜ್ಯದ ರಾಯಚೂರು , ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮೂರು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುತ್ತಿದೆ.
ಮಂತ್ರಾಲಯ- ರಾಯಚೂರು ರಸ್ತೆ ಸಂಚಾರಕ್ಕೆ ಮಳೆಯಿಂದ ಅಡ್ಡಿಯಾಗಿದೆ. ನೀರು ತುಂಬಿದ್ದು ವಾಹನಗಳು ಚಲಿಸಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಯಾದಗಿರಿಯಲ್ಲಿ ಕೂಡ ಭಾರೀ ಮಳೆಯಾಗುತ್ತಿದೆ. ಶಹಾಪುರ ತಾಲೂಕಿನಲ್ಲಿ ಮಳೆಯಿಂದ ವ್ಯಾಪಕ ಹಾನಿ ಸಂಭವಿಸಿದೆ.ತೊಗರಿ, ಹತ್ತಿ ಮತ್ತು ಮೆಣಸಿನ ಬೆಳೆಗೆ ಹಾನಿಯಾಗಿದೆ. ಹುಬ್ಬಳ್ಳಿಯಲ್ಲಿ ಕೂಡ ಮಳೆ ಸುರಿಯುತ್ತಿರುವ ಬಗ್ಗೆ ವರದಿಯಾಗಿದೆ