newsics.com
ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 17ರ ತನಕ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ಮಡಿವಾಳ ಕೆರೆ ನೀರು ಉಕ್ಕಿ ಹರಿದ ಪರಿಣಾಮ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ.
ಬಿಟಿಎಂ ಲೇ ಔಟ್, ಹೆಚ್ ಎಸ್ ಆರ್ ಲೇ ಔಟ್ ಮತ್ತು ಅನುಗ್ರಹ ಲೇ ಔಟ್ ಗಳಲ್ಲಿನ ಹಲವು ಮನೆಗಳಿಗೆ ನೀರು ನುಗ್ಗಿದೆ. ಹಬ್ಬ ಆಚರಿಸಬೇಕಾದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.