ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಉಡುಪಿಯಲ್ಲಿ ಜಡಿಮಳೆ ಮುಂದುವರಿದಿದೆ. ಉಡುಪಿಯ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಉಡುಪಿ ಮತ್ತು ಮಣಿಪಾಲ ಮಧ್ಯೆ ಪ್ರಯಾಣಕ್ಕೆ ಅಡಚಣೆ ಎದುರಾಗಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ
ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಅಗತ್ಯಬಿದ್ದರೆ ಸೇನೆಯ ನೆರವು ಪಡೆದುಕೊಳ್ಳಲು ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ