Saturday, November 26, 2022

ಮುಂಗಾರು ಚುರುಕು: ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಮುಂಗಾರಿನ ಅಬ್ಬರ ಜೋರಾಗಿದ್ದು, ಇನ್ನೂ ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾನ್ಸೂನ್ ಚುರುಕಾಗಿದ್ದು, ಜೂನ್ 15 – 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎನ್ನಲಾಗಿದ್ದು, ಜೂ. 17ರಿಂದ 19ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ,  ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ನಿರೀಕ್ಷಿಸಿರುವುದರಿಂದ ಜೂನ್ 16, 17ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯದಲ್ಲಿ ಜೂನ್ 17ರಿಂದ ತಾತ್ಕಾಲಿಕವಾಗಿ ಮಳೆಯ ಪ್ರಮಾಣ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಮಲೆನಾಡಿನ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ. ಹೊಸನಗರ ತಾಲೂಕಿನಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ 148.8 ಮಿ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.

 

ಅಕ್ಟೋಬರ್’ನಿಂದ ಪದವಿ ತರಗತಿಗಳ ಶೈಕ್ಷಣಿಕ ವರ್ಷ ಆರಂಭ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!