newsics.com
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಕಳೆದ ರಾತ್ರಿಯಿಂದ ಮಳೆ ಸುರಿಯುತ್ತಿದೆ. ಇಂದು ಸಂಜೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಇದು ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಹಾಗೂ ಇನ್ನಿತರ ಪೂರಕ ಅಂಶಗಳಿಂದ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದ್ದು, ಹಲವೆಡೆ ಸಮಸ್ಯೆ ಸೃಷ್ಟಿಯಾಗಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಕೂಡ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.