ಬೆಂಗಳೂರು: ಭಾರೀ ಮಳೆ ಬಂದರೆ ನಗರದ 209 ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಲಿದೆ ಎಂದು ಬಿಬಿಎಂಪಿ ಹೇಳಿದೆ.
209 ಪ್ರದೇಶಗಳ ಪೈಕಿ 153 ಸೂಕ್ಷ್ಮ ಹಾಗೂ 56 ಅತಿ ಸೂಕ್ಷ್ಮ ಪ್ರದೇಶಗಳು ಎಂದು ಪರಿಗಣಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.
ಪ್ರವಾಹದ ಬಗ್ಗೆ ಮುಂಚಿತವಾಗಿ ಮಾಹಿತಿ ತಿಳಿಯಲು 28 ಕಡೆ ಸೆನ್ಸರ್ಗಳನ್ನು ಅಳವಡಿಸಲಾಗಿದ್ದು, ಉಳಿದ ಕಡೆಯೂ ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಇದರಿಂದ ಪ್ರವಾಹ ಪರಿಸ್ಥಿತಿ ಉಂಟಾಗುವುದನ್ನು ತಿಳಿದು ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸುಲಭವಾಗಲಿದೆ ಎಂದು ಮಳೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಪಾಲಿಕೆ ಕಚೇರಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಹೇಳಿದರು.
ತಲಕಾವೇರಿ ಅರ್ಚಕರ ಕುಟುಂಬ ಭೂಸಮಾಧಿ; ಶೋಧ ಕಾರ್ಯಾಚರಣೆ ಸ್ಥಗಿತ
ನಗರದಲ್ಲಿ ಜೂನ್ ಹಾಗೂ ಜುಲೈ ತಿಂಗಳಲ್ಲಿ ವಾಡಿಕೆಯಂತೆ 185 ಮಿ.ಮೀ ಮಳೆಯಾಗಬೇಕು. ಆದರೆ, ಈ ಬಾರಿ ವಾಡಿಕೆಗಿಂತ ಶೇ 65ರಷ್ಟು ಹೆಚ್ಚು ಮಳೆಯಾಗಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆಗಿಂತ ಶೇ 28ರಷ್ಟು ಕಡಿಮೆ ಮಳೆಯಾಗಿದೆ’ ಎಂದು ಮಂಜುನಾಥ ಪ್ರಸಾದ್ ಹೇಳಿದರು.