Tuesday, April 13, 2021

ಉತ್ತರ ಕನ್ನಡದಲ್ಲಿ ಭಾರೀ ಮಳೆ, ರಸ್ತೆಗಳು ಜಲಾವೃತ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದೆ. ನಗರ ಪ್ರದೇಶಗಳಲ್ಲಿ ಕೆಳಮಟ್ಟದಲ್ಲಿರುವ ಹಲವು ರಸ್ತೆಗಳು, ಬಡಾವಣೆಗಳು ಜಲಾವೃತವಾಗಿವೆ.
ಜಿಲ್ಲೆಯ ನದಿಗಳು, ಜಲಾಶಯಗಳಲ್ಲಿ ನೀರಿನ ಹರಿವು ಗಣನೀಯವಾಗಿ ಹೆಚ್ಚಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದ ಮೈ ಕೊರೆಯುವ ಚಳಿಯ ಅನುಭವವಾಗುತ್ತಿದೆ.
ಶಿರಸಿ-ಯಲ್ಲಾಪುರ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ಯಲ್ಲಾಪುರ ನಾಕಾ‌ ಬಳಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಶಿರಸಿಯ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶದ ಜನರು ಮನೆಗೆ ನೀರು ನುಗ್ಗಬಹುದೆಂಬ ಆತಂಕದಲ್ಲಿದ್ದಾರೆ.
ಮಂಗಳವಾರದ ವರದಿಯಂತೆ, ಸೂಪಾ ಜಲಾಶಯದಲ್ಲಿ 530.02 ಮೀಟರ್ (564 ಮೀಟರ್ ಗರಿಷ್ಠ ಮಟ್ಟ), ಕದ್ರಾ ಜಲಾಶಯದಲ್ಲಿ 29.75 ಮೀಟರ್ (34.50 ಮೀಟರ್ ಗರಿಷ್ಠ ಮಟ್ಟ), ಕೊಡಸಳ್ಳಿ ಜಲಾಶಯದಲ್ಲಿ 68.60 ಮೀಟರ್ (75.50 ಮೀಟರ್ ಗರಿಷ್ಠ ಮಟ್ಟ) ನೀರು ಸಂಗ್ರಹವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!