newsics.com
ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಎರಡು ದಿನ (ನ.8, 9) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಇನ್ನೆರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ನ.9 ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಮೆರಿಕ ಅಧ್ಯಕ್ಷರಾಗಿ ಜೊ ಬಿಡೆನ್ ಆಯ್ಕೆ, ಕಮಲಾ ಹ್ಯಾರಿಸ್ ವೈಸ್ ಪ್ರೆಸಿಡೆಂಟ್
ನಾನು ಎಲ್ಲ ಅಮೆರಿಕನ್ನರ ಅಧ್ಯಕ್ಷನಾಗುವೆ: ಬಿಡೆನ್ ಟ್ವೀಟ್
2ನೇ ಮಹಾಯುದ್ಧದಲ್ಲಿ ಭಾಗಿಯಾಗಿದ್ದ ಮಾರ್ಕ್ ರೊಡ್ರಿಗಸ್ ಇನ್ನಿಲ್ಲ