ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಬಿಜೆಪಿ ಪಕ್ಷದ ಹೈಕಮಾಂಡ್ ವರಿಷ್ಠರು ಹಸಿರು ನಿಶಾನೆ ತೋರಿದ್ದು, ಏಳು ಮಂದಿಯನ್ನು ಮಾತ್ರ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂಬ ಷರತ್ತು ಹಾಕಿದ್ದಾರೆ.
ಗೆದ್ದ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡಲೇಬೇಕು ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೇಡಿಕೆಗೆ ಹೈಕಮಾಂಡ್ ಸೊಪ್ಪು ಹಾಕಲಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹದಿಮೂರು ಪ್ಲಸ್ ಐದು ಸೂತ್ರದಡಿ ಸಂಪುಟ ವಿಸ್ತರಿಸಲು ಅವಕಾಶ ಕೊಡಿ ಎಂದು ಯಡಿಯೂರಪ್ಪ ಅವರು ಹೈಕಮಾಂಡ್ ಮುಂದೆ ಮನವಿ ಮಾಡಿಕೊಂಡಿದ್ದರು. ಆದರೆ ಸ್ವಪಕ್ಷದವರನ್ನು ಕೈಬಿಟ್ಟು ಹೊರಗಿನವರಿಗೆ ಆದ್ಯತೆ ನೀಡುವುದಕ್ಕೆ ಹೈಕಮಾಂಡ್ ಸಮ್ಮತಿಸಲಿಲ್ಲ. ಎನ್ನಲಾಗಿದೆ.