ಮಂಗಳೂರು: ಪೌರತ್ವ ಕಾನೂನು ತಿದ್ದುಪಡಿ ವಿರೋಧಿಸಿ ಬೃಹತ್ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಕೇರಳ – ಕರ್ನಾಟಕ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮುಖ್ಯವಾಗಿ ಕೇರಳ ದಿಂದ ಕರ್ನಾಟಕವನ್ನು ಸಂಪರ್ಕಿಸುವ ಎಲ್ಲ ರಸ್ತೆ ಮಾರ್ಗಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರದಲ್ಲಿ ಕೇರಳದ ಕೆಲವು ದುಷ್ಟ ಶಕ್ತಿಗಳ ಕೈವಾಡ ಇತ್ತು ಎಂಬ ಆರೋಪ ಕೇಳಿ ಬಂದಿತ್ತು. ವಾಹನಗಳನ್ನು ತೀವ್ರ ತಪಾಸಣೆಗೆ ಗುರಿಪಡಿಸಲಾಗುತ್ತಿದೆ.