newsics.com
ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಮಠದ ದಾಖಲೆ, ಚೆಕ್ಗಳಿಗೆ ಸಹಿ ಹಾಕಲು ಹೈಕೋರ್ಟ್ ಶುಕ್ರವಾರ ಷರತ್ತುಬದ್ಧ ಅನುಮತಿ ನೀಡಿದೆ.
ಮಠದ ಸಿಬ್ಬಂದಿಗೆ ವೇತನ ಮತ್ತು ಇತರೆ ದೈನಂದಿನ ವೆಚ್ಚಗಳಿಗೆ ಸಂಬಂಧಿಸಿದ ಚೆಕ್ ಗಳಿಗೆ ಸಹಿ ಮಾಡಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸ್ವಾಮೀಜಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಮುರುಘಾ ಶ್ರೀಗಳು ವೇತನಕ್ಕೆ ಸಂಬಂಧಿಸಿದ ಚೆಕ್ಗಳಿಗೆ ಮಾತ್ರ ಸಹಿ ಹಾಕಬೇಕು. ಸಹಿ ಪಡೆಯಲು ಚಿತ್ರದುರ್ಗ ಸೆಂಟ್ರಲ್ ಜೈಲಿನ ಅಧಿಕಾರಿಗಳು ಸಂಬಂಧಪಟ್ಟವರಿಗೆ ಅನುಮತಿ ನೀಡಬೇಕು. ಸಹಿ ಹಾಕುವ ವೇಳೆ ತನಿಖಾಧಿಕಾರಿ, ಜೈಲು ಅಧೀಕ್ಷಕರು ಉಪಸ್ಥಿತರಿರಬೇಕು ಎಂದು ಹೈಕೋರ್ಟ್ ಹೇಳಿದೆ. ಇದರಿಂದ ವೇತನಕ್ಕಾಗಿ ಕಾಯುತ್ತಿದ್ದ ಮಠದ ಮೂರು ಸಾವಿರ ಸಿಬ್ಬಂದಿ ಸದ್ಯಕ್ಕೆ ನಿಟ್ಟುಸಿರುಬಿಟ್ಟಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ