newsics.com
ಬೆಂಗಳೂರು: ಚಾಮರಾಜಪೇಟೆ ಮೈದಾನ ಕಂದಾಯ ಇಲಾಖೆಗೆ ಸೇರಿದ ಭೂಮಿ ಎಂದು ಬಿಬಿಎಂಪಿ ಘೋಷಿಸಿರುವ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸ್ಥಳೀಯ ಪೊಲೀಸರು ಮತ್ತು ಕೆ ಎಸ್ ಆರ್ ಪಿ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಮೈದಾನದ ಸುತ್ತಮುತ್ತ ಸಂಭ್ರಮಾಚರಣೆ ಮತ್ತು ಪ್ರತಿಭಟನೆಯನ್ನು ನಿಷೇಧಿಸಲಾಗಿದೆ.
ಇದೇ ವೇಳೆ ಚಾಮರಾಜ ನಗರ ನಾಗರಿಕರ ಒಕ್ಕೂಟ ಆಗಸ್ಟ್ 15ರಂದು
ಸ್ವಾತಂತ್ರ್ಯ ದಿನ ಆಚರಣೆಗೆ ತೀರ್ಮಾನಿಸಿದೆ. ಈ ಸಂಬಂಧ ಅಧಿಕಾರಿಗಳಿಗೆ ಮನವಿ ನೀಡಲಾಗುವುದು ಎಂದು ನಾಗರಿಕರ ಒಕ್ಕೂಟ ಹೇಳಿದೆ