newsics.com
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹಕಾರ ಬ್ಯಾಂಕ್ ಗೆ ನೀಡಿದ್ದ 5.2 ಕೋಟಿ ರೂ. ಚೆಕ್ ಬೌನ್ಸ್ ಪ್ರಕರಣವನ್ನು ಖಾಸಗಿ ದೂರು ದಾಖಲಿಸಿದ ದಿನಾಂಕದಿಂದ ಮರು ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.
ಈ ಮೊದಲು ಈ ಪ್ರಕರಣವನ್ನು ಚಿಕ್ಕೋಡಿ ನ್ಯಾಯಾಲಯ ವಜಾಗೊಳಿಸಿತ್ತು. ಇದೀಗ ಚಿಕ್ಕೋಡಿ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದ್ದು, ವಿಚಾರಣೆ ಪ್ರಕ್ರಿಯೆ ಕಾನೂನಿಗೆ ಅನುಗುಣವಾಗಿರಲಿಲ್ಲ. ಈಗ ವಿಚಾರಣೆಗೆ ಪರಿಗಣಿಸುವ ಮುನ್ನ ರಮೇಶ್ ಜಾರಕಿಹೊಳಿಗೆ ನೋಟಿಸ್ ನೀಡಿ ಮರು ವಿಚಾರಣೆಗೆ ಸೂಚಿಸಿದೆ.
ಸಾಲಕ್ಕೆ ಪ್ರತಿಯಾಗಿ ನೀಡಿದ್ದ 5.2 ಕೋಟಿ ರೂ. ಮೌಲ್ಯದ ಚೆಕ್ ಬೌನ್ಸ್ ಆಗಿದೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಬೀರೇಶ್ವರ ಸೊಸೈಟಿ ದೂರು ನೀಡಿತ್ತು. ಚಿಕ್ಕೋಡಿ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ವಕೀಲರು ಗೈರು ಹಾಜರಾದ ಹಿನ್ನೆಲೆಯಲ್ಲಿ ಪ್ರಕರಣ ವಜಾಗೊಂಡಿತ್ತು. ಇದೀಗ ಕೇಸ್ ಮರುಜೀವ ಪಡೆದುಕೊಂಡಿದೆ.
ಇಲ್ಲಿ ಮಗು ಹುಟ್ಟಿದಾಗ ಸಂಬಂಧಿಕರಿಗೆ ಅಕ್ಕಿ ಕಳುಹಿಸಿ ಸಂಭ್ರಮಿಸುತ್ತಾರೆ !