Friday, September 30, 2022

ದೊಡ್ಡಬಳ್ಳಾಪುರದಲ್ಲಿ ಅಕ್ರಮ ಬಡಾವಣೆ; 111 ಲೇಔಟ್’ಗಳಿಗೆ ನೋಟಿಸ್

Follow Us

newsics.com ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ): ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಂದಾಯ ಇಲಾಖೆಯ ಪರವಾನಗಿ ಇಲ್ಲದೆ ಅಕ್ರಮವಾಗಿ ನಿರ್ಮಿಸಿದ್ದ ಲೇಔಟ್‌ಗಳನ್ನು ತೆರವುಗೊಳಿಸಿ ತಾಲೂಕಿನ ವಿವಿಧೆಡೆ ನಿರ್ಮಾಣವಾಗಿದ್ದ 17 ಎಕರೆ 11 ಗುಂಟೆ ಜಾಗವನ್ನು ತೆರವುಗೊಳಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಆದೇಶದಂತೆ ದೊಡ್ಡಬಳ್ಳಾಪುರ ತಹಸೀಲ್ದಾರ್‌ ಟಿ. ಶಿವರಾಜ್‌ ನೇತೃತ್ವದಲ್ಲಿ ಅನಧಿಕೃತ ಬಡಾವಣೆಗಳ ತೆರವು ಕಾರ್ಯ ನಡೆದಿದೆ.

ಭೂ ಪರಿವರ್ತನೆ ಮಾಡಿಸದೆ ಅಕ್ರಮವಾಗಿ ಕೃಷಿ ಜಮೀನುಗಳಲ್ಲಿ ನಿರ್ಮಿಸಿರುವ ಬಡಾವಣೆಗಳನ್ನು ತೆರವುಗೊಳಿಸಲಾಗುವುದು. ತಾಲೂಕಿನಲ್ಲಿ 111ಲೇಔಟ್‌ಗಳಿಗೆ ನೋಟಿಸ್‌ ನೀಡಲಾಗಿದೆ. ಮೊದಲನೆ ಹಂತವಾಗಿ ಮಧುರೆಯಲ್ಲಿ ತೆರವು ಕಾರ್ಯ ಪ್ರಾರಂಭ ಮಾಡಿದ್ದೇವೆ. ತೆರವು ಕಾರ್ಯಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲು ಮಾಡಲಾಗುವುದು ಎಂದು ತಹಸೀಲ್ದಾರ್‌ ಟಿ. ಶಿವರಾಜ್‌ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!