Monday, November 29, 2021

ಮೈಸೂರಿನಲ್ಲಿ 12 ಮಂದಿಗೆ ಸೋಂಕು, ನಂಜನಗೂಡಿನಲ್ಲಿ ಕಟ್ಟೆಚ್ಚರ

Follow Us

ಮೈಸೂರು: ಈವರೆಗೆ 12 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. 821 ಜನ ಹೋಮ್ ಕ್ವಾರಂಟೈನ್ ಮುಗಿಸಿದ್ದಾರೆ ಎಂದು ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ.
6 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿದ್ದು, 6 ವ್ಯಕ್ತಿಗಳು ಜಿಲ್ಲಾಸ್ಪತ್ರೆಯಲ್ಲಿದ್ದಾರೆ. ಸಂಜೆ ವೇಳೆಗೆ 6 ಪಾಸಿಟಿವ್ ವ್ಯಕ್ತಿಗಳನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಿದ್ದೇವೆ ಎಂದರು.
ಕೊರೋನಾ ಸೋಂಕು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ನಂಜನಗೂಡಿನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ನಂಜನಗೂಡಿನಲ್ಲಿ 753 ಜನ ಹೋಂ ಕ್ವಾರೆಂಟೈನ್ ಲ್ಲಿದ್ದಾರೆ. 10 ಮನೆಗೆ ಒಬ್ಬ ಪೋಲಿಸ್ ನೇಮಕ ಮಾಡಿದ್ದೇವೆ. ಅವರ ಮನೆಗೆ ಅಗತ್ಯ ವಸ್ತು ನೀಡುವಂತೆ ಸೂಚನೆ ನೀಡಿದ್ದೇವೆ ಎಂದರು.
ಹೋಂ ಕ್ವಾರಂಟೈನ್ ಲ್ಲಿ ಇರುವವರಿಗೆ ಮಾನವೀಯತೆಯಿಂದ ಹೇಳಿದ್ದೇವೆ. ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್ ದಾಖಲು‌ ಮಾಡುತ್ತೇವೆ. ಸಾಮಾಜಿಕ ಅಂತರ ಕಾಪಾಡಲು ಎಲ್ಲಾ ತಾಲ್ಲೂಕು ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಪ್ಲೇಯಿಂಗ್ ಸ್ಕ್ವಾಡ್ ರಚನೆ ಮಾಡಲಾಗಿದೆ ಎಂದರು.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!