ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 48 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ.
ದಾವಣಗೆರೆ 14, ಬೆಳಗಾವಿ 11, ಉತ್ತರಕನ್ನಡ 12, ಬೆಂಗಳೂರು ನಗರ 7, ಚಿತ್ರದುರ್ಗ 3, ಬಳ್ಳಾರಿಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.
ಉತ್ತರಕನ್ನಡದ ಭಟ್ಕಳದಲ್ಲಿ ಇಂದು 12 ಜನರಿಗೆ ಕೊರೋನಾ ಕೇಸ್ ಪತ್ತೆಯಾಗಿದ್ದು, ಇವರಲ್ಲಿ 7 ಜನರು ಒಂದೇ ಕುಟುಂಬದವರಾಗಿದ್ದಾರೆ. ಇವರಲ್ಲಿ ಒಬ್ಬರು ಪಕ್ಕದ ಮನೆಯವರಾಗಿದ್ದಾರೆ.
ಚಿತ್ರದುರ್ಗದ ಮೂವರು ಕೊರೋನಾ ಸೋಂಕಿತರು ಅಹಮದಾಬಾದ್ ಗೆ ತೆರಳಿದ್ದರು. ಮೇ 3ರಂದು ಚಿತ್ರದುರ್ಗಕ್ಕೆ 15 ಜನರು ಬಂದು ಇಳಿದುಕೊಂಡಿದ್ದರು. ಅವರಲ್ಲಿ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈವರೆಗೆ 30 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದರೆ, 376 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.