newsics.com
ಬೆಂಗಳೂರು: ರಾಜ್ಯದ ನೀರಾವರಿ ಇಲಾಖೆಯಲ್ಲಿ ನಡೆದಿದೆಯೆನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರರಿಗಳು ಮಾಜಿ ಮುಖ್ಯಮಂತ್ರಿ ಯೊಬ್ಬರ ಆಪ್ತನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ಉಮೇಶ್ ಎಂಬವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಉಮೇಶ್ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿಯೊಬ್ಬರ ಆಪ್ತರು ಎಂದು ವರದಿಯಾಗಿದೆ.
ಸಹಕಾರ ನಗರ, ರಾಮಕೃಷ್ಣ ಹೆಗ್ಗಡೆ ನಗರದಲ್ಲಿರುವ ಮನೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಸಂಗ್ರಹಿಸಿದ್ದಾರೆ.