newsics.com
ಬೆಂಗಳೂರು: ಪ್ರತಿಷ್ಠಿತ ಸಾರ್ವಜನಿಕ ಸಂಪರ್ಕ ಸಂಸ್ಥೆ ಡಿಸೈನ್ ಬಾಕ್ಸ್ಡ್ ಸಂಸ್ಥೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೊಬ್ಬರ ಡಿಜಿಟಲ್ ಪ್ರಚಾರದ ಹೊಣೆಯನ್ನು ಈ ಸಂಸ್ಥೆಗೆ ನೀಡಲಾಗಿತ್ತು.
10ಕ್ಕೂ ಹೆಚ್ಚು ಅಧಿಕಾರಿಗಳು ಈ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ. ಡಿಜಿಟಲ್ ಮಾಧ್ಯಮ ಪ್ರಚಾರದಲ್ಲಿ ಈ ಸಂಸ್ಥೆ ಅಗ್ರ ಸಾಲಿನಲ್ಲಿ ಗುರುತಿಸಿಕೊಂಡಿದೆ.